Wednesday, July 22, 2026
spot_imgspot_img
spot_imgspot_img

ಹಿರಿಯ ದಫ್ ಉಸ್ತಾದ್ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

- Advertisement -
- Advertisement -

ಬಂಟ್ವಾಳ : ಸುರಿಬೈಲು ಮಸೀದಿ ಬಳಿ ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.ಹಿರಿಯ ದಫ್ ಉಸ್ತಾದ್ ಆಗಿದ್ದ ಇವರು ಆಧ್ಯಾತ್ಮಿಕ ಮಹತ್ವ ಹೊಂದಿರುವ ಸಾಂಪ್ರದಾಯಿಕ ದಫ್ ರಾತಿಬುಗೆ ನೇತೃತ್ವ ವಹಿಸುತ್ತಿದ್ದರು.

ಇವರ ದಫ್ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಿದೆ. ಸುರಿಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಮುಹಝ್ಝಿನ್ (ಮುಕ್ರಿ) ಆಗಿ ಸೇವೆ ಸಲ್ಲಿಸಿದ್ದ ಅವರು ಪರಿಸರದ ಎಲ್ಲೇ ಪುರುಷರು ಮರಣ ಹೊಂದಿದರೆ ಮಯ್ಯತ್ ಪರಿಪಾಲನೆ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಿದ್ದರು. ಮೃತರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನುಅಗಲಿದ್ದಾರೆ.ದ.ಕ ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ ಲತೀಫ್ ನೇರಳಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಂ.ಅಶ್ರಫ್ ಪಾಣೆಮಂಗಳೂರು ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!