Wednesday, July 22, 2026
spot_imgspot_img
spot_imgspot_img

ಮಂಗಳೂರು: ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ

- Advertisement -
- Advertisement -

ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೇ 24ರಂದು ಬೆಳಗಿನ ಜಾವ ಸುಮಾರು 2:10 ಗಂಟೆಗೆ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂದ ಇಬ್ಬರು ಯುವಕರು ಹಲ್ಲೆ ನಡೆಸಿದ್ದರು. ಸ್ಕೂಟರ್‌ನ ಹಿಂಬದಿ ಸವಾರ ಸಿಮೆಂಟ್ ಶೀಟ್ ತುಂಡಿನಿಂದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದ ಪರಿಣಾಮ ಗಾಯವಾಗಿದ್ದು, ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 57/2026 ಕಲಂ 121(1), 109, 132, 3(5) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ಮೇ 26ರಂದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಬಂಧಿತ ಆರೋಪಿಗಳನ್ನು ಸಚಿನ್ ಕೆ.ಆರ್ (24) ಹಾಗೂ ಚಂದನ್ (24) ಎಂದು ಗುರುತಿಸಲಾಗಿದೆ. ಸಚಿನ್ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಹತ್ಯಡ್ಕ ಗ್ರಾಮದ ನಿವಾಸಿಯಾಗಿದ್ದು, ಚಂದನ್ ಪುತ್ತೂರು ತಾಲೂಕಿನ ನೆಲ್ಯಾಡಿಯ ನಿವಾಸಿಯಾಗಿದ್ದಾನೆ.ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸಚಿನ್ ಕುಂಟಿಕಾನದ PON PON Sweets ಪ್ಯಾಕ್ಟರಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೆ, ಚಂದನ್ ಕೂಳೂರಿನ ಅದ್ವೈತ್ ಕಿಯಾ ಶೋರೂಮ್‌ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದನು.

ಮಧ್ಯರಾತ್ರಿ ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳನ್ನು ಬೀಟ್ ಪೊಲೀಸರು ತಡೆದು ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

- Advertisement -

Related news

error: Content is protected !!