



ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಅಧೀನದಲ್ಲಿರುವ IMC ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಹಾಗೂ Quest Alliance ಇವರ ಸಂಯುಕ್ತ ಆಶ್ರಯದಲ್ಲಿ ಮೇ 29ರಂದು ಸರಕಾರಿ ಐಟಿಐ ವಿಟ್ಲ ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ KNND Associate Pvt Ltd Mangalore, Brevera Technologies Mysore, Trident Automobile Bangalore, SRK Ladder Puttur, Aravind Motors Mangalore, Akshaya Power System Mangalore, KSRTC Puttur, Hima Refrigerat Puttur, TVS Motors Mysore, Mandovi Motors Pvt Ltd Mangalore, Adish Industries Baikampady Mangalore, Dwaraka Construction Puttur, Protech India Private Limited Bangalore ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದಾರೆ.
ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ಸ್ ಮೆಕಾನಿಕ್, ಮೆಕಾನಿಕ್ ಇಲೆಕ್ಟ್ರಿಕ್ ವೆಹಿಕಲ್, ಮೆಕಾನಿಕ್ ಮೋಟಾರು ವೆಹಿಕಲ್, ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಟೆಕ್ನಿಷಿಯನ್. COPA ಹಾಗೂ ಡ್ರಾಫ್ಟ್ ಮೆನ್ ಸಿವಿಲ್ ವೃತ್ತಿಗಳಿಗೆ ಸೇರಿದ ಅಂತಿಮ ವರ್ಷದಲ್ಲಿ ಓದುತ್ತಿರುವ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.
ಈ ಉದ್ಯೋಗ ಮೇಳದ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕಾ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವುದರೊಂದಿಗೆ ಕೈಗಾರಿಕಾ ಮತ್ತು ತರಬೇತಿ ಸಂಸ್ಥೆಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು ಉದ್ದೇಶವಾಗಿದೆ. ಸಾರ್ವಜನಿಕರು ಹಾಗೂ ಆಸಕ್ತ ವಿದ್ಯಾರ್ಥಿಗಳು ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








