Wednesday, August 5, 2026
spot_imgspot_img
spot_imgspot_img

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ.

ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು. ರಾಜೀನಾಮೆ ಪತ್ರವನ್ನ ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಬೇಕಿತ್ತು. ಗುರುವಾರ (ಮೇ 28) ರಾತ್ರಿ ಇಂದೋರ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯಪಾಲರು ಇಂದು ಬೆಳಗ್ಗೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೀಗಾಗಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಜರೂರಾಗಿ ಸಾಗಿದೆ.

- Advertisement -

Related news

error: Content is protected !!