- Advertisement -
- Advertisement -
ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬೆಂಗಳೂರಿನ ವಿಜಯನಗರ ಎಂಸಿ ಲೇಔಟ್ನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಇವರು ಡಿವೈಎಸ್ಪಿ ಆಗಿ ನಿವೃತ್ತರಾದವರು.

ಹನುಮಂತಪ್ಪ ಮಾಗಡಿರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದರು. ಯಶವಂತಪುರದಲ್ಲಿ ಎಸಿಪಿಯಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.





- Advertisement -








