- Advertisement -
- Advertisement -





ಬೆಂಗಳೂರು: ಡಿಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಇಂದು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.
ಸಿಎಲ್ಪಿ ಸಭೆಯ ಬಳಿಕ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಶಾಸಕಾಂಗ ಪಕ್ಷದ ನಾಯಕ ರಾಜ್ಯಪಾಲರನ್ನ ಭೇಟಿ ಮಾಡೋದು ನಿಯಮ. ಆದರೆ ಇಂದು ಸಂಜೆಯೇ ರಾಜ್ಯಪಾಲರು ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಅದಕ್ಕೂ ಮುನ್ನವೇ ಡಿಕೆ ಶಿವಕುಮಾರ್ ರಾಜ್ಯಪಾಲರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
ಡಿಕೆಶಿ ಆಗಮನದ ಹಿನ್ನೆಲೆ ಲೋಕಭವನದ ಮುಂದೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕೆಎಸ್ಆರ್ಪಿ ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








