- Advertisement -
- Advertisement -


ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸೆಗಣಿ ಎಸೆದು ದುಷ್ಕರ್ಮಿಗಳು ಅವಮಾನ ಮಾಡಿರುವ ಘಟನೆ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿಯ ಮುದಗನೂರು ಗ್ರಾಮದಲ್ಲಿ ನಡೆದಿದೆ.



ಕಳೆದ ರಾತ್ರಿ ಈ ದುಷ್ಕೃತ್ಯ ಎಸಗಲಾಗಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಅರಕಲಗೂಡಿನಲ್ಲಿ ಇಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ನಡುವೆ ನಡೆದಿರುವ ದುಷ್ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.
- Advertisement -







