Wednesday, July 22, 2026
spot_imgspot_img
spot_imgspot_img

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಸಂಪುಟ ವಿಸ್ತರಣೆ

- Advertisement -
- Advertisement -

ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸೋಮವಾರ(ಇಂದು) ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 35 ಮಂದಿ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸುವೇಂದು ಅಧಿಕಾರಿ ಅವರು ಮೇ 9 ರಂದು ಬಂಗಾಳ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ ಮೂರು ವಾರಗಳ ನಂತರ ಸಂಪುಟ ವಿಸ್ತರಣೆಯಾಗಿದ್ದು, ಕೋಲ್ಕತ್ತಾದ ಲೋಕಭವನದಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ ನಡೆದು, ರಾಜ್ಯಪಾಲ ಆರ್.ಎನ್ ರವಿ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಭಾರತದ ಸಂವಿಧಾನದ ವಿಧಿ 164(1ಎ) ಪ್ರಕಾರ ಪಶ್ಚಿಮ ಬಂಗಾಳವು ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 44 ಸಚಿವರನ್ನ ಹೊಂದಬಹುದಾಗಿದೆ.

ಮೊದಲ ಹಂತದಲ್ಲಿ ಸುವೇಂದು ಅಧಿಕಾರಿ ಅವರೊಟ್ಟಿಗೆ ಬಿಜೆಪಿ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ನಿಸಿತ್ ಪ್ರಾಮಾಣಿಕ್, ಅಶೋಕ್ ಕೀರ್ತಾನಿಯಾ ಮತ್ತು ಕ್ಷುದಿರಾಮ್ ತುಡು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಂದು 2ನೇ ಹಂತದಲ್ಲಿ 35 ಶಾಸಕರು ಪ್ರಮಾಣ ಸ್ವೀಕರಿಸಿದ್ದಾರೆ.

35 ಶಾಸಕರಲ್ಲಿ ಅರ್ಜುನ್ ಸಿಂಗ್, ತಪಸ್ ರಾಯ್, ಸಾರದ್ವತ್ ಮುಖರ್ಜಿ, ಜಗನ್ನಾಥ್ ಚಟ್ಟೋಪಾಧ್ಯಾಯ ಮತ್ತು ಶಂಕರ್ ಘೋಷ್ ಸೇರಿದ್ದಾರೆ. ಜೊತೆಗೆ ಸ್ವಪನ್ ದಾಸ್‌ಗುಪ್ತಾ, ದೂಧ್ ಕುಮಾರ್ ಮೊಂಡಲ್, ದೀಪಕ್ ಬರ್ಮನ್, ಮನೋಜ್ ಒರಾನ್ ಮತ್ತು ಗೌರಿ ಶಂಕರ್ ಘೋಷ್ ಕೂಡ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಶಾಸಕರಾದ ರಾಜೇಶ್ ಮಹಾತ, ಇಂದ್ರಾನಿಲ್ ಖಾನ್ ಮತ್ತು ಮಾಲತಿ ರಾವ ರಾಯ್ ಅವರು ಸುವೇಂಧು ಸರ್ಕಾರದಲ್ಲಿ ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಸಂತಾನು ಪ್ರಮಾಣಿಕ್, ಪೂರ್ಣಿಮಾ ಚಕ್ರವರ್ತಿ, ಉಮೇಶ್ ರೈ, ಜೋಯೆಲ್ ಮುರ್ಮು, ಅಶೋಕ್ ದಿಂಡಾ, ಆನಂದಮೋಯ್ ಬರ್ಮನ್, ಕೌಶಿಕ್ ಚೌಧರಿ, ಗಾರ್ಗಿ ದಾಸ್ ಘೋಷ್, ಭಾಸ್ಕರ್ ಭಟ್ಟಾಚಾರ್ಯ, ದಿಬಾಕರ್ ಘರಾಮಿ ಮತ್ತು ಸುಮನಾ ಸರ್ಕಾರ್ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಒಟ್ಟು ಬಲ 41ಕ್ಕೆ ಏರಿಕೆಯಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!