- Advertisement -
- Advertisement -


ಬೆಳ್ತಂಗಡಿ: 15 ವರ್ಷದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿಯಲ್ಲಿ ಸೋಮವಾರ ಬೆಳಕಿಗೆ ಬಂದಿದೆ.




ಪ್ರಕರಣದ ದೂರುದಾರರ ಪುತ್ರಿಯಾಗಿರುವ ಬಾಲಕಿ, ಜೂನ್ 1ರಂದು ಬೆಳಿಗ್ಗೆ ತನ್ನ ಕೋಣೆಯ ಬಾಗಿಲು ತೆರೆಯದೆ ಇದ್ದ ಹಿನ್ನೆಲೆಯಲ್ಲಿ ತಾಯಿ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಬಳಿಕ ಕಿಟಕಿಯಿಂದ ನೋಡಿದಾಗ ಬಾಲಕಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾಳೆ ಎಂದು ತಿಳಿದುಬಂದಿದೆ.

ಬಾಲಕಿಯ ಸಾವಿನ ಬಗ್ಗೆ ಸಂಶಯವಿದೆ ಎಂದು ಪೋಷಕರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 31/2026, ಕಲಂ 194(3)(iv) ಬಿಎನ್ಎಸ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -








