Sunday, July 19, 2026
spot_imgspot_img
spot_imgspot_img

ಜಯಲಲಿತಾ ಸಹೋದರ ಎನ್.ಜೆ. ವಾಸುದೇವನ್ ನಿಧನ

- Advertisement -
- Advertisement -

ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಸಹೋದರ ಎನ್.ಜೆ. ವಾಸುದೇವನ್(92) ಅವರು ಇಂದು ಬೆಳಿಗ್ಗೆ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ.

ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದ ಸಮೀಪವಿರುವ ಚಾಮನಹಳ್ಳಿಯಲ್ಲಿರುವ ತಮ್ಮ ಸಾಕು ಮಗಳ ಮನೆಯಲ್ಲಿ ವಾಸುದೇವನ್ ಅವರು ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ರಂಗರಾಜಪುರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಜಯಲಲಿತಾ ಅವರ ಕುಟುಂಬದ ಹಿರಿಯ ಸದಸ್ಯರಾಗಿದ್ದ ವಾಸುದೇವನ್ ಅವರ ನಿಧನಕ್ಕೆ ಆಪ್ತರು ಮತ್ತು ಸ್ಥಳೀಯರು ಸಂತಾಪ ಸೂಚಿಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!