Thursday, June 4, 2026
spot_imgspot_img
spot_imgspot_img

ಡಿ.ಕೆ.ಶಿವಕುಮಾರ್ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಅಧಿಕೃತ ಪಟ್ಟಿ ಪ್ರಕಟ!

- Advertisement -
- Advertisement -

ಬೆಂಗಳೂರು: ಕರ್ನಾಟಕದ ಹೊಸ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಗೆ ವೇದಿಕೆ ಸಜ್ಜಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯಕತ್ವ ಪರಿವರ್ತನೆಯ ಜೊತೆಗೆ, ಕಾಂಗ್ರೆಸ್ ಪಕ್ಷವು ಸಚಿವರ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಹೊಸ ಮುಖ್ಯಮಂತ್ರಿಯೊಂದಿಗೆ 14 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ. ಹಿರಿಯ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರು ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಏಕೈಕ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಈಗ ‘ಅಧಿಕೃತಗೊಂಡಿದೆ. ಆ ಮೂಲಕ ಹೈಕಮಾಂಡ್ ಹಿರಿಯ ನಾಯಕನ ಅನುಭವಕ್ಕೆ ದೊಡ್ಡ ಮನ್ನಣೆ ನೀಡಿದೆ.

ಈ ಬಾರಿಯ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ನಾಜೂಕಾದ ನಡೆ ಇಟ್ಟಿದೆ. ಇಂದು ಪ್ರಮಾಣವಚನ ಸ್ವೀಕರಿಸಲಿರುವ ಒಟ್ಟು 14 ನಾಯಕರ ಪೈಕಿ 12 ಮಂದಿ ನಾಯಕರು ಈ ಹಿಂದಿನ ಸಿದ್ದರಾಮಯ್ಯ ಅವರ ಸಂಪುಟದಲ್ಲೂ ಸಚಿವರಾಗಿ ಕಾರ್ಯನಿರ್ವಹಿಸಿದ ಅಪಾರ ಅನುಭವ ಹೊಂದಿದ್ದಾರೆ. ಆಡಳಿತ ಯಂತ್ರಕ್ಕೆ ಯಾವುದೇ ಹಿನ್ನಡೆಯಾಗದಂತೆ ಮುನ್ನಡೆಸಲು ಈ ಹಿರಿಯ ನಾಯಕರನ್ನು ಯಥಾವತ್ತಾಗಿ ಮುಂದುವರೆಸಲಾಗಿದೆ.

ಹಳೇ ಸಚಿವರ ದಂಡಿನ ಮಧ್ಯೆ ಇಬ್ಬರು ಪ್ರಮುಖ ನಾಯಕರು ಈ ಬಾರಿ ಹೊಸದಾಗಿ ಮಂತ್ರಿ ಪಟ್ಟವನ್ನು ಅಲಂಕರಿಸುತ್ತಿದ್ದಾರೆ. ವಿಧಾನಸಭಾ ಸ್ಪೀಕರ್ ಆಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಸರ್ಕಾರದ ಸಚಿವರಿಗೆ ಬಿಸಿ ಮುಟ್ಟಿಸಿದ್ದ ಯು.ಟಿ. ಖಾದರ್ ಅವರು ಈ ಬಾರಿ ಸ್ಪೀಕರ್ ಸ್ಥಾನದಿಂದ ನೇರವಾಗಿ ಸಚಿವ ಸಂಪುಟಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಪ್ರಸ್ತುತ ಪರಿಷತ್ ಸದಸ್ಯರಾಗಿರುವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಮೊದಲ ಬಾರಿಗೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜ್ಯ ರಾಜಕಾರಣದ ಮುಂಚೂಣಿಗೆ ಬರಲಿದ್ದಾರೆ.

14 ಮಂದಿಯಿಂದ ಪ್ರಮಾಣವಚನ
ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

- Advertisement -

Related news

error: Content is protected !!