- Advertisement -
- Advertisement -







ಬೆಂಗಳೂರು: ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ.
ಲೋಕಭವದ ಗ್ಲಾಸ್‌ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದರು.
ಬಳಿಕ ನೂತನ ಉಪಮುಖ್ಯಮಂತ್ರಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ನೂತನ ಸಿಎಂ ಡಿಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
- Advertisement -








