- Advertisement -
- Advertisement -






ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕುಂಬಳಗೋಡು ವ್ಯಾಪ್ತಿಯಲ್ಲಿ ನಡೆದಿದೆ.
ಜ್ಯೋತಿ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ. ಜ್ಯೋತಿಗೆ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಮನನೊಂದು ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಘಟನೆ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








