- Advertisement -
- Advertisement -

ಕೊಚ್ಚಿ, ಜೂ. 6: ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ಶನಿವಾರ ನಿಧನರಾದರು.
ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಸಲೀಂ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ ಎಂದು Asianet News Malayalam ವರದಿ ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ಅವರು ಯಕೃತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.ಹಾಸ್ಯ ಭಾವನಾತ್ಮಕ ಹಾಗೂ ಗಂಭೀರ ಪಾತ್ರಗಳಲ್ಲಿ ಅಭಿನಯಿಸಿ ಮಲಯಾಳಂ ಚಿತ್ರರಂಗದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದ ಸಲೀಂ ಕುಮಾರ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.
- Advertisement -








