Sunday, August 2, 2026
spot_imgspot_img
spot_imgspot_img

ಕದನ ವಿರಾಮದ ಬಳಿಕ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ

- Advertisement -
- Advertisement -

ಜೆರುಸಲೇಂ: ಏಪ್ರಿಲ್‌ನಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಅಮೆರಿಕದ ವಿನಂತಿಗಳನ್ನು ಧಿಕ್ಕರಿಸುತ್ತಲೇ ಬಂದ ಇರಾನ್‌ ಯಾವುದೇ ಎಚ್ಚರಿಕೆಯಿಲ್ಲದೇ ಇಸ್ರೇಲ್‌ನ ಬೈರೂತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿ ಇರಾನ್‌ ಮಿಸೈಲ್‌ ದಾಳಿ ನಡೆಸಿದೆ.

ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿರುವಂತೆಯೇ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಸಂಘರ್ಷ ಹೆಚ್ಚಾಗಿದೆ. ಇದರಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ ಮುಂದುವರಿದಿದ್ದು, ಇರಾನ್‌ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಸಂಭವನೀಯ ಪ್ರತಿಕ್ರಿಯೆಗಾಗಿ ತನ್ನ ಪಶ್ಚಿಮ ವಾಯುಪ್ರದೇಶವನ್ನು ಇರಾನ್‌ ಮುಚ್ಚಿದೆ. ಸಂಭಾವ್ಯ ಇಸ್ರೇಲಿ ಆಕ್ರಮಣಕ್ಕೆ ಸಿದ್ಧವಾಗಲು ನೆರೆಯ ಇರಾಕ್ ಮತ್ತು ಸಿರಿಯಾ ಕೂಡ ತಮ್ಮ ವಾಯುಸೀಮೆಯನ್ನು ಬಂದ್‌ ಮಾಡಿವೆ.

ಬೈರೂತ್‌ನ ದಕ್ಷಿಣ ಉಪನಗರಗಳ ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಲೆಬನಾನ್‌ನ ಮೇಲೆ ಇಸ್ರೇಲ್‌ನಿಂದ ನಿರಂತರ ದಾಳಿ ನಡೆಯುತ್ತಿದ್ದರಿಂದ ಪ್ರತಿದಾಳಿ ನೆಡಸಲಾಗಿದೆ ಎಂದು ಇರಾನ್ ಸಮರ್ಥಿಸಿಕೊಂಡಿದೆ.

ಇರಾನ್ ಕ್ಷಿಪಣಿಗಳನ್ನ ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿರುವ ಇಸ್ರೇಲ್‌ ಮಿಲಿಟರಿ ಪಡೆ, ಪ್ರತೀಕಾರಕ್ಕೆ ದಾಳಿಗೆ ಮುಂದಾಗುತ್ತಿದೆ. ಮತ್ತೊಂದು ಕಡೆ ಇರಾನ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ಸಹ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಈ ಮಧ್ಯೆ ಇಸ್ರೇಲ್‌ ಮೇಲೆ ದಾಳಿ ನಡೆಸಿದ ಹೊರತಾಗಿಯೂ ಬೆಂಜಮಿನ್‌ ನೆತನ್ಯಾಹು ಅವರಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರ್ನಿಂಗ್‌ ಕೊಟ್ಟಿದ್ದಾರೆ. ಇರಾನ್‌ನ ಕ್ಷಿಪಣಿ ದಾಳಿ‌ಗೆ ಪ್ರತೀಕಾರ ತೀರಿಸಿಕೊಳ್ಳಬೇಡಿ, ರಾಜತಾಂತ್ರಿಕತೆಗೆ ಹೆಚ್ಚಿನ ಸಮಯ ನೀಡಬೇಕೆಂದು ನೆತನ್ಯಾಹುಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಆದರೆ ತನ್ನ ಮೇಲೆ ದಾಳಿ ಮಾಡುವ ಮೂಲಕ ಇರಾನ್ ‘ಗಂಭೀರ ತಪ್ಪು’ ಮಾಡಿದೆ ಎಂದು ಇಸ್ರೇಲ್‌ನ ಮಿಲಿಟರಿ ಹೇಳಿದ್ದು, ಇರಾನ್‌ನ 11 ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿಸಿದೆ.

ಹೆಜ್ಜುಲ್ಲಾ ಬಂಡುಕೋರರ ಗುಂಪು ಉತ್ತರ ಇಸ್ರೇಲ್ ಕಡೆಗೆ ಗುಂಡಿನ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ದಕ್ಷಿಣ ಬೈರೂತ್‌ನ ಉಪನಗರಗಳ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೊಂಡಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!