Thursday, August 6, 2026
spot_imgspot_img
spot_imgspot_img

ಎಐಸಿಸಿ ಕಾರ್ಯದರ್ಶಿ, ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

- Advertisement -
- Advertisement -

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ನಿಧನರಾಗಿದ್ದಾರೆ.

ಭಾನುವಾರ (ಜೂ.7) ರಾತ್ರಿ ಸೂರಜ್ ಹೆಗ್ಡೆ (55) ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ.

ಸೂರಜ್ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸೂರಜ್ ಅಗಲಿಕೆಗೆ ಸಿಎಂ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!