Tuesday, June 9, 2026
spot_imgspot_img
spot_imgspot_img

ಮಹಿಳೆಯ ಸಾಮೂಹಿಕ ಅತ್ಯಾಚಾರ ಆರೋಪ : 10 ಮಂದಿಯ ಬಂಧನ

- Advertisement -
- Advertisement -

ಚನ್ನಗಿರಿ : ತಾಲೂಕಿನ ಯಲೋದಹಳ್ಳಿ ಗ್ರಾಮದ ಸಮೀಪ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹಾಗೂ ಫೋಟೋ-ವಿಡಿಯೋಗಳನ್ನು ಚಿತ್ರೀಕರಿಸಿ ವೈರಲ್‌ ಮಾಡಿರುವ ಆರೋಪದಡಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಘಟನೆ ಸಂಬಂಧ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ಚಟಾಕಿ ನಾಗರಾಜ, ಇಸ್ತ್ರೀ ನಾಗರಾಜ, ಮಧು, ಅರ್ಜುನ, ಬಸವಂತ, ಕುಂದೂರ ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ ಹಾಗೂ ಪ್ರದೀಪ್ ಬಂಧಿತರು.41 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!