Saturday, June 13, 2026
spot_imgspot_img
spot_imgspot_img

NDPS ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಜಾಮೀನಿನ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ NDPS ಪ್ರಕರಣದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ 76/2021 ರ ಕಲಂ 8(ಸಿ), 21(ಬಿ) NDPS ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ಆರೋಪಿ ಫಜಲ್ (31), ತಂದೆ ಮೊಹಮ್ಮದ್ ಅಲಿ, ಮೊಹಮ್ಮದ್ ಅಲಿ ಮಂಜೀಲ್, ಪಚ್ಚಿಲಾಂಬರ್, ಉಪ್ಪಳ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿ, ದಿನಾಂಕ 09-06-2026 ರಂದು ಉಪ್ಪಳದಲ್ಲಿರುವ ಆತನ ಮನೆಯಿಂದ ವಶಕ್ಕೆ ಪಡೆದಿದ್ದಾರೆ.ನಂತರ ಆರೋಪಿಯನ್ನು ಮಂಗಳೂರಿನ ಮಾನ್ಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸ್ಪೆಷಲ್ ಕೇಸ್ ನಂಬರ್ 23/2026 ರ ವಿಚಾರಣೆಯಂತೆ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!