




ಟೆಹ್ರಾನ್: ಹಾರ್ಮುಜ್ ಜಲಸಂಧಿಯ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡ ಬೆನ್ನಲ್ಲೇ ಅಮೆರಿಕ ಸೇನೆ ಬುಧವಾರ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ.
ವಾಯು ರಕ್ಷಣಾ, ನೆಲದ ನಿಯಂತ್ರಣ ಕೇಂದ್ರಗಳು ಮತ್ತು ಕಣ್ಗಾವಲು ರಾಡಾರ್ ತಾಣಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ವಾಯುಪಡೆ ಮತ್ತು ನೌಕಾಪಡೆಯ ಫೈಟರ್ ಜೆಟ್‌ಗಳು ದಾಳಿ ನಡೆಸಿವೆ ಎಂದು ಯುಎಸ್ ಮಿಲಿಟರಿಯ ಸೆಂಟ್ರಲ್ ಕಮಾಂಡ್ ಮಾಹಿತಿ ನೀಡಿದೆ. ಬಂದರ್ ಅಬ್ಬಾಸ್ ಮತ್ತು ಕೆಶ್ಮ್ ದ್ವೀಪದ ಸುತ್ತಲೂ ದಾಳಿಗಳನ್ನು ಇರಾನ್ ಒಪ್ಪಿಕೊಂಡಿದ್ದು, ದಾಳಿಯಿಂದಾದ ಹಾನಿಯ ಬಗ್ಗೆ ಯಾವುದೇ ವಿವರ ತಿಳಿದುಬಂದಿಲ್ಲ.
ಅಮೆರಿಕದ ಪಡೆಗಳು ಮತ್ತು ಅಂತರರಾಷ್ಟ್ರೀಯ ವಾಣಿಜ್ಯ ಹಡಗುಗಳ ಮೇಲಿನ ಇತ್ತೀಚಿನ ದಾಳಿಗಳಿಗೆ ಪ್ರತ್ಯುತ್ತರವಾಗಿ ಈ ಕಾರ್ಯಾಚರಣೆ ನಡೆದಿದೆ ಎಂದು ಯುಎಸ್ ಮಿಲಿಟರಿಯ ಸೆಂಟ್ರಲ್ ಕಮಾಂಡ್ ತಿಳಿಸಿದೆ.
ದ್ವೀಪ ಸಾಮ್ರಾಜ್ಯವು ಅಂತಹ ದಾಳಿಯ ಬಗ್ಗೆ ಯಾವುದೇ ಎಚ್ಚರಿಕೆ ನೀಡದಿದ್ದರೂ, ಬಹ್ರೇನ್‌ನಲ್ಲಿರುವ ಯುಎಸ್ ನೌಕಾಪಡೆಯ 5 ನೇ ಫ್ಲೀಟ್ ಪ್ರಧಾನ ಕಚೇರಿಯನ್ನು ಡ್ರೋನ್ ಮೂಲಕ ಗುರಿಯಾಗಿಸಿಕೊಂಡಿರುವುದಾಗಿ ಇರಾನ್ ಹೇಳಿದೆ.








