- Advertisement -
- Advertisement -





ಬಳ್ಳಾರಿ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ಘಟನೆ ನಡೆದಿದ್ದು, ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.
ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ತೀವ್ರತೆಗೆ ವಾಹನಗಳಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಬೆಂಕಿ ಹೊತ್ತಿಕೊಂಡ ವೇಳೆ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ದೀಕ್ಷಿತ್ (28) ಹೊರಬರಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








