Wednesday, June 10, 2026
spot_imgspot_img
spot_imgspot_img

ಪೋಕ್ಸೋ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಪುತ್ತೂರು: ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ನಮನ್ ನಾಯಕ್ (32)ನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.2018ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 448, 506, 354 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆಗೆ ಹಾಜರಾಗದೆ ಆರೋಪಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.ಆರೋಪಿಯ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬೆಂಗಳೂರಿನ ಕೂಡ್ಲುಪೇಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!