Thursday, June 11, 2026
spot_imgspot_img
spot_imgspot_img

ಒಮಾನ್‌ ಕರಾವಳಿಯಲ್ಲಿ ಹಡಗಿನ ಮೇಲೆ ಅಮೆರಿಕ ದಾಳಿ; ಮೂವರು ಭಾರತೀಯರು ನಾಪತ್ತೆ

- Advertisement -
- Advertisement -

ನವದೆಹಲಿ: ಒಮಾನ್‌ ಕರಾವಳಿಯಲ್ಲಿ 24 ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ದೊಡ್ಡ ಬೆಳವಣಿಗೆಯೊಂದರಲ್ಲಿ, ದಾಳಿಯ ನಂತರ ದೆಹಲಿಯಲ್ಲಿರುವ ಅಮೆರಿಕದ ಉನ್ನತ ರಾಜತಾಂತ್ರಿಕರಿಗೆ ಭಾರತ ಡಿಮಾರ್ಚ್ ಜಾರಿ ಮಾಡಿದೆ.

ಒಮಾನ್ ಕರಾವಳಿಯಲ್ಲಿ ಸೆಟ್ಟೆಬೆಲ್ಲೊ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ. ಹಡಗಿನಲ್ಲಿದ್ದ 24 ಭಾರತೀಯ ಸಿಬ್ಬಂದಿಯಲ್ಲಿ ಇಲ್ಲಿಯವರೆಗೆ 21 ಭಾರತೀಯರನ್ನು ರಕ್ಷಿಸಲಾಗಿದ್ದು, 3 ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.‌

ಈ ಪ್ರದೇಶದಲ್ಲಿ ಹಡಗು ಸಾಗಣೆಯ ಮೇಲಿನ ದಾಳಿಗಳು ತೀವ್ರ ಕಳವಳಕಾರಿ. ಇದು ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ ಎಂದು ಭಾರತ ಅಸಮಾಧಾನ ಹೊರಹಾಕಿದೆ.

ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮರಳಲು ಸಾಧ್ಯವಾಗುವಂತೆ, ಉದ್ವಿಗ್ನತೆಯನ್ನು ತಕ್ಷಣವೇ ಕಡಿಮೆ ಮಾಡಲು ಮತ್ತು ರಾಜತಾಂತ್ರಿಕ ಪರಿಹಾರಕ್ಕಾಗಿ ನಡೆಯುತ್ತಿರುವ ಮಾತುಕತೆಗಳನ್ನು ಮುಕ್ತಾಯಗೊಳಿಸಲು ನಾವು ನಮ್ಮ ಕರೆಯನ್ನು ಪುನರುಚ್ಚರಿಸುತ್ತೇವೆ. ಈ ಪ್ರದೇಶದಲ್ಲಿ ವಾಣಿಜ್ಯ ಹಡಗು ಸಾಗಣೆ ಮತ್ತು ನಾಗರಿಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದು ಕೊನೆಗೊಳ್ಳಬೇಕು. ಅಂತರರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಈ ಪ್ರದೇಶದಲ್ಲಿನ ಜಲಮಾರ್ಗಗಳ ಮೂಲಕ ಮುಕ್ತ ಮತ್ತು ಅಡೆತಡೆಯಿಲ್ಲದ ಸಂಚರಣೆಯನ್ನು ಆದಷ್ಟು ಬೇಗ ಪುನಃಸ್ಥಾಪಿಸಬೇಕು ಎಂದು ಭಾರತ ಆಗ್ರಹಿಸಿರುವುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!