Thursday, June 11, 2026
spot_imgspot_img
spot_imgspot_img

ಚಂದಳಿಕೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

- Advertisement -
- Advertisement -

ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಚಂದಳಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಮಾಹಿತಿ ಹಾಗೂ ಗಿಡಗಳ ನಾಟಿ ಮಾಡುವ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ವಿಟ್ಲ ಅರಮನೆಯ ಕೃಷ್ಣಯ್ಯ. ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಸುಮತಿ ದೇಜಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಗುರು ವಿಶ್ವನಾಥ ಕುಳಾಲು ಪರಿಸರ ಮಾಹಿತಿ ನೀಡಿದರು. ವಲಯ ಯೋಜನಾಧಿಕಾರಿ ಸುರೇಶ್ ಗೌಡ, ನಟೇಶ್ ವಿಟ್ಲ ಅವರುಗಳು ಸಸಹಕರಿಸಿದರ ಶುಭಹಾರೈಸಿದರು. ಎಸ್ ಡಿ ಎಂ ಸಿ ಉಪಾಧ್ಯಕ್ಷ ಜಾಫರ್, ಒಕ್ಕೂಟದ ಅಧ್ಯಕ್ಷರಾದ ದಿವಾಕರ ಶೆಟ್ಟಿ, ವಿಶ್ವನಾಥ್ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯೋಜನೆಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಶಾಲಾ ಆವರಣದಲ್ಲಿ ಹಲವಾರು ಉಪಯುಕ್ತ ಗಿಡಗಳನ್ನು ನಾಟಿ ಮಾಡಿದರು ನಂತರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪದ್ಮನಾಭ ಶೆಟ್ಟಿ ಸ್ವಾಗತಿಸಿ, ಶಿಕ್ಷಕ ವೆಂಕಟೇಶ್ ವಂದಿಸಿದರು. ಶ್ರೀಮತಿ ದಮಯಂತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

- Advertisement -

Related news

error: Content is protected !!