Thursday, June 11, 2026
spot_imgspot_img
spot_imgspot_img

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ

- Advertisement -
- Advertisement -

ಬೆಂಗಳೂರು: ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗೇನಾ ಅಗ್ರಹಾರದ ತೋಪು ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರೌಡಿಶೀಟರ್ ಓರ್ವನ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.

ಗುಂಡೇಟಿಗೆ ಒಳಗಾದ ಆರೋಪಿಯನ್ನು ಜೀವ(19) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಆತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮಾಹಿತಿ ಪ್ರಕಾರ, ಜೀವ ಕೊಲೆ, ಸುಲಿಗೆ ಹಾಗೂ ದರೋಡೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಕಳೆದ ವಾರ ಹೆಬ್ಬಗೋಡಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಗಳಲ್ಲಿಯೂ ಈತನ ಹೆಸರು ಕೇಳಿಬಂದಿತ್ತು.

ಖಚಿತ ಮಾಹಿತಿ ಮೇರೆಗೆ ಹೆಬ್ಬಗೋಡಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಪೊಲೀಸ್‌ ಸಿಬ್ಬಂದಿ ನಾಗೇಶ್ ಅವರ ಮೇಲೆ ದಾಳಿ ನಡೆಸಲು ಮುಂದಾದಾಗ, ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ಆತ್ಮರಕ್ಷಣೆಗಾಗಿ ಸಬ್‌ ಇನ್‌ಸ್ಪೆಕ್ಟರ್ ಅಯ್ಯಪ್ಪ ಅವರು ಫೈರಿಂಗ್‌ ನಡೆಸಿದ್ದಾರೆ.

ಇನ್ಸ್‌ಪೆಕ್ಟರ್‌ ಸೋಮಶೇಖರ್ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿ ಜೀವನ ಕಾಲಿಗೆ ಗುಂಡು ತಗುಲಿದ್ದು, ಬಳಿಕ ಆತನನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!