- Advertisement -
- Advertisement -

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ (NDPS) ಪ್ರಕರಣದ ವಾರಂಟ್ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ. 309/2017, ಕಲಂ 8(c) ಹಾಗೂ 27(B) ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ (41) ಬಂಧಿತ ಆರೋಪಿ.
ಆರೋಪಿಯ ಇರುವಿಕೆಯ ಕುರಿತು ಮಾಹಿತಿ ಸಂಗ್ರಹಿಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ಪಿಸಿ 2456 ಶ್ರೀಕಾಂತ್ ಹಾಗೂ ಪಿಸಿ 2468 ಅರುಣ್ ಅವರು ಜೂನ್ 12ರಂದು ವಗ್ಗ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.
- Advertisement -







