Saturday, June 20, 2026
spot_imgspot_img
spot_imgspot_img

6 ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು – ಮಗು ಪಾರು

- Advertisement -
- Advertisement -

ಹೈದರಾಬಾದ್: ಮಹಿಳಾ ಟೆಕ್ಕಿಯೊಬ್ಬರು ತನ್ನ 6 ತಿಂಗಳ ಮಗುವಿನೊಂದಿಗೆ ಅಪಾರ್ಟ್‌ಮೆಂಟ್‌ನ 6ನೇ ಮಹಡಿಯಿಂದ ಜಿಗಿದ ಪರಿಣಾಮ ಸ್ಥಳದಲ್ಲೇ ತಾಯಿ ಮೃತಪಟ್ಟಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಹೈದರಾಬಾದ್‌ನ ಮಿಯಾಪುರ್ ಪ್ರದೇಶದ ಮಯೂರಿ ನಗರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಇಶಾ ಸಾಹು (37) ಎಂದು ಗುರುತಿಸಲಾಗಿದೆ. ಇಶಾ ತಮ್ಮ ಆರು ತಿಂಗಳ ಮಗುವನ್ನು ತೋಳಲ್ಲಿ ಹಿಡಿದುಕೊಂಡು ಅಪಾರ್ಟ್‌ಮೆಂಟ್‌ನ ಆರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗೆ ಬೀಳುವ ವೇಳೆ ಮಗು ಅವರ ಕೈಯಿಂದ ಜಾರಿಬಿದ್ದ ಪರಿಣಾಮ ಗಂಭೀರ ಅಪಾಯದಿಂದ ಪಾರಾಗಿದ್ದು, ಸಣ್ಣ ಗಾಯಗಳೊಂದಿಗೆ ಬದುಕುಳಿದಿದೆ.

ಘಟನೆ ನಡೆದ ತಕ್ಷಣ ಸ್ಥಳೀಯ ನಿವಾಸಿಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಗೊಂಡ ಮಗುವನ್ನು ಕೂಡಲೇ ಕೆಪಿಎಚ್‌ಬಿಯಲ್ಲಿರುವ ಲೋಟಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ ಇಶಾ ಸಾಹು ಎತ್ತರದ ಕಟ್ಟಡದಿಂದ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಸಾವಿನಿಂದ ಕುಟುಂಬ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಆಘಾತಕ್ಕೊಳಗಾಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಈಶಾ ಸಾಹು ಕಳೆದ ಹಲವು ತಿಂಗಳುಗಳಿಂದ ನಿದ್ರಾಹೀನತೆ ಸೇರಿದಂತೆ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಸಮಸ್ಯೆಯಿಂದ ಉಂಟಾದ ಮಾನಸಿಕ ಒತ್ತಡ ಮತ್ತು ಆತಂಕವೇ ಈ ದುರ್ಘಟನೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಕುಟುಂಬ ಸದಸ್ಯರು, ಆಪ್ತರು ಹಾಗೂ ಪರಿಚಿತರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಘಟನೆಯ ಹಿಂದಿನ ಕಾರಣಗಳನ್ನು ಪತ್ತೆಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!