Thursday, October 29, 2026
spot_imgspot_img
spot_imgspot_img

ಬೆಂಗಳೂರು: ಡಿವೈಡರ್‌ಗೆ ಬೈಕ್ ಡಿಕ್ಕಿ – ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

- Advertisement -
- Advertisement -

ಬೆಂಗಳೂರು: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ.

ಅತುಲ್, ಗೌರಿಶಂಕರ್ ಮೃತ ನರ್ಸಿಂಗ್ ವಿದ್ಯಾರ್ಥಿಗಳು. ನಸುಕಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ತಿಳಿದು ಬಂದಿದೆ.

- Advertisement -

Related news

error: Content is protected !!