- Advertisement -
- Advertisement -





ಬೆಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಬಳಿಕ ತನಗೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹಾಕಲಾಗಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾನೆ
ಈ ಸಂಬಂಧ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಚಿನ್ನಯ್ಯ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರು ನೀಡಿದ್ದಾನೆ.
ದೂರಿನಲ್ಲಿ, ಈ ಅರ್ಜಿಯ ಹಿಂದೆ ಯಾರು ಇದ್ದಾರೆ?, ನಿಮಗೆ ಯಾರು ಸಹಾಯ ಮಾಡುತ್ತಿದ್ದಾರೆ? ಈ ಕೆಲಸವನ್ನು ಯಾರ ಪ್ರೇರಣೆಯಿಂದ ಮಾಡುತ್ತಿದ್ದೀರಿ? ಎಂಬ ಪ್ರಶ್ನೆಗಳನ್ನು ಪದೇ ಪದೇ ಕೇಳಲಾಗಿದೆ ಎಂದು ಉಲ್ಲೇಖಿಸಿದ್ದಾನೆ. ಅಲ್ಲದೆ ತನ್ನ ಮೊಬೈಲ್ ನಂಬರ್ ಕೇಳಿ ಮಾತನಾಡಲು ಒತ್ತಾಯ ಮಾಡುತ್ತಿದ್ದಾರೆ. ಕುಟುಂಬದವರ ಬಗ್ಗೆ ಮಾಹಿತಿ ಕಲೆಹಾಕಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದ್ದಾನೆ.
ಗಿರೀಶ್ ಮಟ್ಟಣ್ಣನವರ್ ಪರೋಕ್ಷವಾಗಿ ಬೆದರಿಕೆ ಹಾಕುವ ಹಾಗೂ ಮಾನಸಿಕ ಒತ್ತಡ ಹೇರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಚಿನ್ನಯ್ಯ ದೂರಿನಲ್ಲಿ ತಿಳಿಸಿದ್ದಾನೆ.
- Advertisement -








