Thursday, June 18, 2026
spot_imgspot_img
spot_imgspot_img

ವಿಟ್ಲ: ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಡಾಲರ್ ಸಲಾಂ ಬಂಧನ

- Advertisement -
- Advertisement -

ವಿಟ್ಲ: ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ @ ಕೆ.ಎಂ. ಸಲಾಂ @ ಡಾಲರ್ ಸಲಾಂ ಎಂಬಾತನು ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. 24/2020 ಹಾಗೂ ಅ.ಕ್ರ. 34/2022ರ ಕಳ್ಳತನ ಪ್ರಕರಣಗಳಲ್ಲಿ (ಕಲಂ 457, 380 ಐಪಿಸಿ) ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಜೂನ್ 16ರಂದು ಪುತ್ತೂರು ರೈಲ್ವೆ ನಿಲ್ದಾಣದ ಸಮೀಪ ಪತ್ತೆಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಇದಲ್ಲದೆ, ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 45/2023ರಡಿ ಕಲಂ 353, 332 ಹಾಗೂ 504 ಐಪಿಸಿ ಪ್ರಕರಣವೂ ದಾಖಲಾಗಿದ್ದು, ಆ ಪ್ರಕರಣದಲ್ಲಿಯೂ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!