Monday, June 22, 2026
spot_imgspot_img
spot_imgspot_img

ವಿಟ್ಲ ಜೇಸೀಸ್ ಶಾಲೆಯಲ್ಲಿ ‘ಫ್ರೆಶರ್ಸ್ ಡೇ’ ಸಂಭ್ರಮ

- Advertisement -
- Advertisement -


ವಿಟ್ಲ: ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜೂನ್ 17ರಂದು ‘ಫ್ರೆಶರ್ಸ್ ಡೇ’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಟ್ಲ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ಸಹಶಿಕ್ಷಕ ರಾಜಶೇಖರ್ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ಜೋಸ್ವಿನ್ ನೀಲೇಶ್ ಲಾಸ್ರಾಡೊ ಭಾಗವಹಿಸಿದರು.


ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಉಪಾಧ್ಯಕ್ಷ ರಾಧಾಕೃಷ್ಣ ಪೈ ಅವರ 60ನೇ ಜನ್ಮದಿನದ ಅಂಗವಾಗಿ ರಾಧಾಕೃಷ್ಣ ಪೈ ಹಾಗೂ ಅನುರಾಧಾ ಪೈ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳು, ಜೀವನದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಮಕ್ಕಳಿಗೆ ವಿವಿಧ ಕಥೆಗಳ ಮೂಲಕ ವಿವರಿಸಿದರು. ಹಳೆಯ ವಿದ್ಯಾರ್ಥಿ ಜೋಸ್ವಿನ್ ನೀಲೇಶ್ ಲಾಸ್ರಾಡೊ ಅವರು ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಸಲಹೆ ನೀಡಿ, ಕಠಿಣ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು ಎಂದು ತಿಳಿಸಿದರು.


ಪ್ರಾಂಶುಪಾಲ ಜಯರಾಮ ರೈ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಜೀವನದಲ್ಲಿ ಯಶಸ್ಸು ಸಾಧಿಸಲು ಶ್ರಮ, ಶಿಸ್ತು ಹಾಗೂ ದೃಢ ಸಂಕಲ್ಪದ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು.


ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಶಾಲೆಗೆ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ವಿನೂತನ ರೀತಿಯಲ್ಲಿ ಸ್ವಾಗತಿಸಲಾಯಿತು. ಹೊಸ ವಿದ್ಯಾರ್ಥಿಗಳು ವಿವಿಧ ಪ್ರತಿಭಾ ಪ್ರದರ್ಶನಗಳ ಮೂಲಕ ತಮ್ಮ ಕೌಶಲ್ಯವನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ರಾಘವೇಂದ್ರ ಪೈ, ಉಪಪ್ರಾಂಶುಪಾಲೆಯರಾದ ಹೇಮಲತಾ ಹಾಗೂ ಕವಿತಾ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ಹೊಸ ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಸಲ್ಲಿಸಿದರು. 10ನೇ ತರಗತಿಯ ಶ್ರುತಿಕಾ ಹಾಗೂ ಅದ್ವೈತ ಕಾರ್ಯಕ್ರಮ ನಿರೂಪಿಸಿದ್ದು, ಶ್ರಾವ್ಯ ಎಸ್.ಆರ್. ಸ್ವಾಗತಿಸಿ, ಎನ್. ಶ್ರಾವ್ಯ ರಾವ್ ವಂದಿಸಿದರು.

- Advertisement -

Related news

error: Content is protected !!