Friday, June 19, 2026
spot_imgspot_img
spot_imgspot_img

ಟೆಲಿಗ್ರಾಂ ತಾತ್ಕಾಲಿಕ ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ನವದೆಹಲಿ: ನೀಟ್ ಯುಜಿ-2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್‌ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕ ಸದಸ್ಯ ಪೀಠ ಜೂ.18 ರಂದು ವಿಚಾರಣೆ ನಡೆಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿ, ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಸರ್ಕಾರದ ಕ್ರಮ ಕನಿಷ್ಠ ನಿರ್ಬಂಧವಾಗಿದ್ದು, ಇದರಿಂದ ಆದೇಶ ಅಸಮಾನವಾಗಿದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೆ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಭಾರತದಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಟೆಲಿಗ್ರಾಂ ತಾತ್ಕಾಲಿಕ ನಿಷೇಧಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶಿಫಾರಸು ಮಾಡಿತ್ತು. ಅಲ್ಲದೇ ಜೂನ್ 30 ರವರೆಗೆ ಈ ಹಿಂದೆ ಪೋಸ್ಟ್ ಮಾಡಿದ ಸಂದೇಶಗಳಿಗೆ ಎಡಿಟ್‌ ಮಾಡುವ ಸೌಲಭ್ಯವನ್ನು ನಿಷ್ಕ್ರಿಯಗೊಳಿಸಲು ವೇದಿಕೆಗೆ ಸೂಚಿಸಲಾಗಿದೆ.

ಮೇ 3 ರಂದು ನಡೆಸಲಾದ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಬಳಿಕ ಆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಮರು ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ತನಿಖಾ ದಳ ತನಿಖೆ ನಡೆಸುತ್ತಿದೆ ಎಂಬುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!