Sunday, June 21, 2026
spot_imgspot_img
spot_imgspot_img

ಜೂ 20: ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ, ಜೂನ್ 19: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಯೋಜನೆಗಳಡಿ ಆಯ್ಕೆಯಾದ ವೈಯಕ್ತಿಕ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಜೂನ್ 20ರಂದು ಶನಿವಾರ ಮಧ್ಯಾಹ್ನ 2.30 ಗಂಟೆಗೆ ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯೊಟ್ಟು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದ್ದು, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುವುದು.

ಈ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಫಲಾನುಭವಿಗಳು ಭಾಗವಹಿಸಲಿದ್ದು, ಕಾರ್ಯಕ್ರಮದ ವರದಿಗಾಗಿ ಪತ್ರಿಕಾ ಹಾಗೂ ಟಿ.ವಿ. ಮಾಧ್ಯಮದ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ ಎಂದು ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!