Monday, June 22, 2026
spot_imgspot_img
spot_imgspot_img

ಆಲಂಕಾರು: ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ..!!

- Advertisement -
- Advertisement -

ಆಲಂಕಾರು: ಆಲಂಕಾರು ಪೇಟೆಯಲ್ಲಿ ಹೋಟೆಲ್‌ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆಯಲ್ಲಿ ಬಾಡಿಗೆ ಮನೆಯಲ್ಲಿ ಜೂ.20ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಈ ದಂಪತಿ ಎರಡು ವರ್ಷದ ಹೆಣ್ಣು ಮಗು ದೃವಿಯೊಂದಿಗೆ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಇವರು, ಜೂ.19ರ ಸಂಜೆ ಆಲಂಕಾರು ಕಜೆಯ ಬಾಡಿಗೆ ಮನೆಗೆ ಪುನಃ ಬಂದಿದ್ದರು. ಜೂ.20ರಂದು ಘಟನೆ ನಡೆದಿದ್ದು, ಮನೆಯ ಒಳಗಿನ ಚಿಲಕ ಹಾಕಲಾಗಿತ್ತು. ಎರಡು ವರ್ಷದ ಹೆಣ್ಣು ಮಗು ಅತ್ತು ಮತ್ತೆ ನಿದ್ದೆಗೆ ಜಾರಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!