Thursday, July 30, 2026
spot_imgspot_img
spot_imgspot_img

ಭೂಗತ ಲೋಕದ ಪಾತಕಿ ರವಿ ಪೂಜಾರಿ ಆಸ್ಪತ್ರೆಗೆ ಶಿಫ್ಟ್!!

- Advertisement -
- Advertisement -

ಬೆಂಗಳೂರು: ಭೂಗತ ಲೋಕದ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಜೈಲಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಎರಡು ದಶಕಗಳ ಕಾಲ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಕಳೆದ ಫೆಬ್ರವರಿಯಲ್ಲಿ ನಗರ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿಗಟ್ಟಿದ್ದರು.

ಇತ್ತೀಚೆಗೆ ರವಿ ಪೂಜಾರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜೈಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ರವಿ ಪೂಜಾರಿಗೆ ಹರ್ನಿಯಾ ಸಮಸ್ಯೆಯಿದೆ. ಹೆಚ್ಚಿನ ಚಿಕಿತ್ಸೆವಿದೆ ಎಂದು ಜೈಲಾಧಿಕಾರಿಗಳಿಗೆ ವೈದ್ಯರು ವರದಿ ನೀಡಿದ್ದರು. ವೈದ್ಯರ ಸೂಚನೆ ಮೇರೆಗೆ ನಿನ್ನೆ ಮಧ್ಯಾಹ್ನ ಪೊಲೀಸ್‌ ಬಂದೋಬಸ್ತಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!