Saturday, June 20, 2026
spot_imgspot_img
spot_imgspot_img

ಒಂದೇ ಕ್ಷಣದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬ; ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು

- Advertisement -
- Advertisement -

ಸುಳ್ಯ: ಮುರುಳ್ಯ ಗ್ರಾಮದ ಕಡೀರ ಪ್ರದೇಶದಲ್ಲಿ ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತಪಟ್ಟ ಹೃದಯವಿದ್ರಾವಕ ಘಟನೆ ಶನಿವಾರ ಸಂಜೆ ನಡೆದಿದೆ.ಮೃತ ಮಕ್ಕಳನ್ನು ಕಡೀರ ನಿವಾಸಿ ಹಾಗೂ ವೆಲ್ಡಿಂಗ್ ಕೆಲಸ ಮಾಡುತ್ತಿರುವ ವಸಂತ ಅವರ ಮಕ್ಕಳಾದ ಜಶ್ವಿನ್ ಮತ್ತು ಜಸ್ವಿತ್ (5½ ವರ್ಷ) ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ, ಸಂಜೆ ವೇಳೆ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾದರೂ ಮಕ್ಕಳನ್ನು ಉಳಿಸಲು ಸಾಧ್ಯವಾಗಲಿಲ್ಲ.

ಸುಳ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕೆರೆಯಿಂದ ಮಕ್ಕಳ ಮೃತದೇಹಗಳನ್ನು ಮೇಲಕ್ಕೆತ್ತಿದರು.ಮೃತರಾದ ಜಶ್ವಿನ್ ಮತ್ತು ಜಸ್ವಿತ್ ಮುರುಳ್ಯ ಶಾಂತಿನಗರ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿಗಳಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

- Advertisement -

Related news

error: Content is protected !!