Monday, June 22, 2026
spot_imgspot_img
spot_imgspot_img

9 ತಿಂಗಳ ಮಗುವಿನ ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ

- Advertisement -
- Advertisement -

ಲಕ್ನೋ: 9 ತಿಂಗಳ ಮಗುವಿನ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಗೋರಖ್‌ಪುರ ಜಿಲ್ಲೆಯ ಗುಲರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಮಗು ಶುಕ್ರವಾರ ತಡರಾತ್ರಿ ಕಾಣೆಯಾಗಿತ್ತು. ಮಗು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬದವರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದು, ಶನಿವಾರ ಬೆಳಗ್ಗೆ ಮನೆಯ ಸಮೀಪದ ಜಮೀನೊಂದರಲ್ಲಿ ಮಗು ಪತ್ತೆಯಾಗಿದೆ.

ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕುಟುಂಬ ಸದಸ್ಯರು ಹಾಗೂ ಸಂಬಂಧಿಕರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಂಬಂಧಿಯಾಗಿದ್ದ 12 ವರ್ಷದ ಬಾಲಕನ ಮೇಲೆ ಅನುಮಾನ ವ್ಯಕ್ತವಾಗಿತ್ತು. ಮೂರು ದಿನಗಳ ಹಿಂದೆ ಚಂಡೀಗಢದಿಂದ ಗ್ರಾಮಕ್ಕೆ ಬಂದಿದ್ದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಬಾಲಕ ಅತ್ಯಾಚಾರ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ತನಿಖೆ ವೇಳೆ ಬಾಲಕ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಮತ್ತು ಅನೇಕ ಅಶ್ಲೀಲ ವೆಬ್‌ಸೈಟ್‌ಗಳ ನೋಡಿರುವ ಮಾಹಿತಿ ಪತ್ತೆಯಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!