- Advertisement -
- Advertisement -






ಮೈಸೂರು: ಡೆತ್‌ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ.
ತಂದೆ ಶಿವಣ್ಣ, ತಾಯಿ ನಾಗರತ್ನ ಹಾಗೂ ಮಗಳು ರಕ್ಷಿತಾ ಆತ್ಮಹತ್ಯೆಗೆ ಶರಣಾದವರು
ಮೃತ ರಕ್ಷಿತಾಗೆ ಇತ್ತೀಚೆಗಷ್ಟೇ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ, ಇದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತ ಈ ಹಿಂದೆ ರಕ್ಷಿತಾ ತನಗೆ ಕಳುಹಿಸಿದ್ದ ಕೆಲವು ಮೆಸೇಜ್ ಹಾಗೂ ಫೋಟೋಗಳನ್ನು ಇಟ್ಟುಕೊಂಡು ಆಕೆಗೆ ನಿರಂತರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡುತ್ತಿದ್ದ.
ಇಷ್ಟಕ್ಕೇ ನಿಲ್ಲಿಸದೇ ರಕ್ಷಿತಾಳ ಮದುವೆ ನಿಶ್ಚಯವಾಗಿದ್ದ ಯುವಕನಿಗೂ ಆ ಮೆಸೇಜ್ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಇದರಿಂದ ಅವಮಾನಕ್ಕೊಳಗಾದ ಕುಟುಂಬಸ್ಥರು ಮೂವರ ಸಾವಿಗೂ ಉಲ್ಲಾಸ್ ಗೌಡ ಕಾರಣನೆಂದು ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ವರುಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








