Tuesday, June 23, 2026
spot_imgspot_img
spot_imgspot_img

ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

- Advertisement -
- Advertisement -

ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್ ) ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟಕೃಷ್ಣ ಶರ್ಮ ಉದ್ಘಾಟಿಸಿ ಯೋಗವು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು ನಾವೆಲ್ಲರೂ ಯೋಗವನ್ನು ನಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಆನಂದ ಶೆಟ್ಟಿ ಖ್ಯಾತ ಯೋಗ ತರಬೇತುದಾರರು ಯೋಗದ ಮಹತ್ವ ಮತ್ತು ಆರೋಗ್ಯದ ಮೇಲೆ ಯೋಗವು ಬೀರುವ ಪರಿಣಾಮಗಳ ಬಗ್ಗೆ ಉಪನ್ಯಾಸ ಮತ್ತು ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಉದಯ ನಾಯ್ಕ್ ಕಾರ್ಯಕ್ರಮ ವನ್ನು ನಿರೂಪಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು

- Advertisement -

Related news

error: Content is protected !!