Friday, June 26, 2026
spot_imgspot_img
spot_imgspot_img

ಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

- Advertisement -
- Advertisement -

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್‌ ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ.

ರೆಗ್ಯೂಲರ್‌ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದ್ದು, ಮೂರು ವಾರಗಳ ವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಯಲಿದೆ ಎಂದು ಕೋರ್ಟ್‌ ಹೇಳಿದೆ. ಹೀಗಾಗಿ ಬಂಧನ ಭೀತಿಯಿಂದ ವಚನಾನಂದ ಶ್ರೀಗಳು ಪಾರಾಗಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ನಿರಿಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಹೇಳಿತು. ದೂರು ನೀಡುವ 1 ವಾರ ಮೊದಲೇ ನಿರೀಕ್ಷಣಾ ಜಾಮೀನು ನೀಡಲಾಗಿದೆ, ಆದ್ದರಿಂದ ಈ ಕ್ರಮ ಸರಿಯಲ್ಲ ಎಂದು ಹೈಕೋರ್ಟ್‌ ಜಾಮೀನು ರದ್ದುಗೊಳಿಸಿತು.

ವಚನಾನಂದ ಸ್ವಾಮೀಜಿ ಜಾಮೀನು ಪಡೆದ ರೀತಿಗೆ ಸ್ವತಃ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿತ್ತು. ಮೇ 7ರಂದು ಸ್ವಾಮೀಜಿ ವಿರುದ್ಧ ಪೋಕ್ಸೋ ದೂರು ದಾಖಲಾಗಿದೆ. ಆದರೆ ಶ್ರೀಗಳು ಅದರ ಹಿಂದಿನ ದಿನ ಅಂದರೆ ಮೇ 6ರಂದೇ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ದೂರು ದಾಖಲು ಮುನ್ನವೇ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದಿದ್ದ ಹೈಕೋರ್ಟ್, ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದಿತ್ತು. ಈ ಸಂಬಂಧ ಶ್ರೀಗಳಿಗೆ ನೋಟಿಸ್ ಜಾರಿ ಮಾಡಿತ್ತು ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!