
ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ನೆಟ್ಲಮುಡ್ನೂರು ಮತ್ತು ಅನಂತಾಡಿ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಬಗ್ಗೆ ಮಾಹಿತಿ ಕಾರ್ಯಾಗಾರವು ಶುಕ್ರವಾರ ಕೊಡಾಜೆಯ ನಕ್ಷತ್ರ ಆಡಿಟೋರಿಯಂ ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಇಲ್ಲದಂತೆ ಆಗಬಾರದು. ಈ ನಿಟ್ಟಿನಲ್ಲಿ ಪಕ್ಷದ ವಲಯಾಧ್ಯಕ್ಷರು, ಬಿ.ಎಲ್.ಎ ಗಳು, ಬೂತ್ ಅದ್ಯಕ್ಷರುಗಳು ಹಾಗೂ ಕಾರ್ಯಕರ್ತರು ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಎಸ್.ಐ.ಆರ್ ಬಗ್ಗೆ ಮಾಹಿತಿ ನೀಡಿದರು.ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಂಚ ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಅನಂತಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಶ್ರೀಧರ ರೈ ಸ್ವಾಗತಿಸಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಕೊಪ್ಪರಿಗೆ ವಂದಿಸಿದರು.







