Sunday, June 28, 2026
spot_imgspot_img
spot_imgspot_img

ದೇವರ ಮಹೋತ್ಸವ, ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವನೆ –150 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

- Advertisement -
- Advertisement -

ತುಮಕೂರು: ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ 150 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲಪುರದಲ್ಲಿ ಗುರುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ ಸತ್ತಿ ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಊಟ ಸೇವನೆ ಮಾಡಿದ ಬಳಿಕ ಬಹುತೇಕರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೆಲವರಿಗೆ ಗುರುವಾರ ರಾತ್ರಿಯೇ, ಇನ್ನೂ ಕೆಲವರಿಗೆ ಮರುದಿನ ಬೆಳಗ್ಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಡಿಕೊಂಡಿದೆ.

ಕಾರ್ಯಕ್ರಮದಲ್ಲಿ ಊಟ ಸೇವನೆ ಮಾಡಿದ್ದವರಲ್ಲಿ ಮಕ್ಕಳು ಸೇರಿದಂತೆ ಹಲವಾರು ಮಂದಿ ಅಸ್ವಸ್ಥಗೊಂಡಿದಾರೆ. ಕೂಡಲೇ ಅವರನ್ನ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!