Sunday, June 28, 2026
spot_imgspot_img
spot_imgspot_img

ವಿಟ್ಲ: ಕಾರು–ಸ್ಕೂಟರ್ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಗಂಭೀರ ಗಾಯ

- Advertisement -
- Advertisement -

ವಿಟ್ಲ: ವಿಟ್ಲ–ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಎಂಬಲ್ಲಿ ಇಂದು(ಜೂ.28) ಬೆಳಿಗ್ಗೆ ಎರ್ಟಿಗಾ ಕಾರು ಹಾಗೂ ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ ಎರ್ಟಿಗಾ ಕಾರು ಎದುರಿನಿಂದ ಬರುತ್ತಿದ್ದ ಹೋಂಡಾ ಡಿಯೋ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಚರಂಡಿಗೆ ಇಳಿದು ನಿಂತಿದೆ.

ಅಪಘಾತದ ತೀವ್ರತೆಗೆ ಹೋಂಡಾ ಡಿಯೋ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುವನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ಸವಾರ ಮುಡಿಪು ನಿವಾಸಿ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!