Sunday, June 28, 2026
spot_imgspot_img
spot_imgspot_img

ಸ್ವಲ್ಪ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆ

- Advertisement -
- Advertisement -

ಬೆಂಗಳೂರು: ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ ಗುಟ್ಕಾಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ದಲ್ಲಿ ಡಿಕೆಶಿ ಮಾತನಾಡಿದರು.

ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕಠಿಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಇಂದು ನೀವೆಲ್ಲರೂ ಸೇರಿ ಹಮ್ಮಿಕೊಂಡಿರುವ ಈ ಸಮಾವೇಶ ಸ್ವಾಗತಾರ್ಹ. ವ್ಯಸನಮುಕ್ತ ನಾಳಿನ ಸುಂದರ ಕನಸನ್ನು ನನಸಾಗಿಸಲು ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ನಾಗರಿಕರು ಒಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು

- Advertisement -

Related news

error: Content is protected !!