Monday, June 29, 2026
spot_imgspot_img
spot_imgspot_img

ವಿಟ್ಲ:ಪಡೀಬಾಗಿಲಿನಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಮರ-ವಿದ್ಯುತ್ ಕಂಬ ಬಿದ್ದು ಅವಘಡ; ದಂಪತಿ ಪ್ರಾಣಾಪಾಯದಿಂದ ಪಾರು

- Advertisement -
- Advertisement -

ವಿಟ್ಲ: ಪಡೀಬಾಗಿಲು ಸಮೀಪ ಮರವು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ಮರ ಹಾಗೂ ವಿದ್ಯುತ್ ಕಂಬ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದಿವೆ. ಕಾರಿನಲ್ಲಿ ಗಂಡ-ಹೆಂಡತಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆಯ ಪರಿಣಾಮ ಕೆಲಕಾಲ ಹೆದ್ದಾರಿ ಸಂಚಾರಕ್ಕೆ ಅಡಚಣೆ ಉಂಟಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಬಳಿಕ ಪೊಲೀಸರು, ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೆದ್ದಾರಿಯಲ್ಲಿ ಸಂಚಾರವನ್ನು ಪುನಃ ಆರಂಭಿಸಲಾಯಿತು.

- Advertisement -

Related news

error: Content is protected !!