- Advertisement -
- Advertisement -






ಲಕ್ನೋ: ಉತ್ತರ ಪ್ರದೇಶದ ನೋಯ್ಡಾದ ಬೃಹತ್ ವಸತಿ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನೋಯ್ಡಾದ ಸೆಕ್ಟರ್ 119 ರಲ್ಲಿರುವ ಅರಣ್ಯ ಸೊಸೈಟಿಯಲ್ಲಿ ಈ ಅವಘಡ ಸಂಭವಿಸಿದೆ.
ಕಟ್ಟಡದ 21ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸುಮಾರು 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಕಟ್ಟಡದಲ್ಲಿ ಜನ ಸಿಲುಕಿರುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಅವಘಡಕ್ಕೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಎಸಿ ಘಟಕದಲ್ಲಿ ಸಂಭವಿಸಿದ ಸ್ಫೋಟವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಅಗ್ನಿ ಅವಘಡದ ಬಗ್ಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -








