




ಬೆಂಗಳೂರು: ಲಗೇಜ್ ಬ್ಯಾಗ್ನಲ್ಲಿ ಅಡಗಿಸಿಟ್ಟುಕೊಂಡು ಡ್ರಗ್ಸ್ ತರುತ್ತಿದ್ದ ಮೂವರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಬರೋಬ್ಬರಿ 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ನಷ್ಟು ಎಂಡಿಎಂಎ ಕ್ರಿಸ್ಟಲ್, 4 ಮೊಬೈಲ್ ಫೋನ್, 2 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ್ದ ಇತರ ವಸ್ತುಗಳನ್ನ ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳು ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಮನೆ ಬಾಡಿಗೆ ಪಡೆದು ವಾಸವಿದ್ದರು. ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು.
ಮೆಡಿಕಲ್ ಮತ್ತು ಟೂರಿಸ್ಟ್ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ನೈಜೀರಿಯಾದಿಂದ ಬೇರೆ ಪೆಡ್ಲರ್ ಗಳಿಂದ ಎಂಡಿಎಂಎ ಕ್ರಿಸ್ಟಲ್ ಬೆಂಗಳೂರಿಗೆ ತರಿಸಿಕೊಳ್ತಿದ್ರು. ಬಾಡಿಗೆ ಮನೆಯಲ್ಲಿ ಎಲ್ಲಾ ತಯಾರು ಮಾಡಿಕೊಂಡು, ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅನಧಿಕೃತವಾಗಿ ವಾಸವಾಗಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ.
ಸದ್ಯ ಆರೋಪಿಗಳನ್ನ ಬಂದಿಸಿರುವ ಸಿಸಿಬಿ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ.








