Thursday, July 2, 2026
spot_imgspot_img
spot_imgspot_img

ಕನ್ನಡ ಪತ್ರಿಕೋದ್ಯಮಕ್ಕೆ ‘ಮಂಗಳೂರು ಸಮಾಚಾರ’ದ ಕೊಡುಗೆ ಚಾರಿತ್ರಿಕ; ಡಾ. ಹರ್ಮನ್ ಮೋಗ್ಲಿಂಗ್ ಸೇವೆ ಸ್ಮರಣೆ

- Advertisement -
- Advertisement -

ಮಂಗಳೂರು: ಕನ್ನಡ ಪತ್ರಿಕೋದ್ಯಮಕ್ಕೆ ಭದ್ರ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಹಾಗೂ ಅದರ ಸಂಪಾದಕರಾದ ಡಾ. ಹರ್ಮನ್ ಮೋಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕವು ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಹರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಮಾತನಾಡಿದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಮೋಗ್ಲಿಂಗ್ ಅವರು ಜೈಮಿನಿ ಭಾರತ, ಬಸವ ಪುರಾಣ ಹಾಗೂ ದಾಸ ಸಾಹಿತ್ಯ ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿ ಪ್ರಕಟಿಸುವ ಮೂಲಕ ಮಾಧ್ಯಮ ಕ್ಷೇತ್ರದ ಜೊತೆಗೆ ಕನ್ನಡ ಸಾಹಿತ್ಯಕ್ಕೂ ಅಪೂರ್ವ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಎಂ. ವಾಟ್ಸನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಪಿ.ಬಿ., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಮಾತನಾಡಿದರು.

ಮಂಗಳೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿಪ್ರಕಾಶ್ ಪುಣಚ, ಕೋಶಾಧಿಕಾರಿ ಕೆನ್ಯೂಟ್ ಪಿಂಟೋ, ಮಂಗಳೂರು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪತ್ರಕರ್ತರಾದ ಡೊನಾಲ್ಡ್ ಪಿರೇರಾ, ಎಡ್ವರ್ಡ್ ಲೋಬೋ, ಶಾರುಖ್, ಹಮೀದ್ ವಿಟ್ಲ, ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ಈಶ್ವರ ವಾರಣಾಶಿ ಸ್ವಾಗತಿಸಿ, ವಂದಿಸಿದರು.

- Advertisement -

Related news

error: Content is protected !!