Friday, July 3, 2026
spot_imgspot_img
spot_imgspot_img

ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

- Advertisement -
- Advertisement -

ಹಾಸನ: ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಕಲಗೂಡಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಚ್ಚುನಾಯಿಯ ದಾಳಿಯಿಂದ ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯಗೊಂಡಿದ್ದಾರೆ.

ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಮಕ್ಕಳು ಸೇರಿದಂತೆ 8 ಜನರಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಕೊಣನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಚ್ಚುನಾಯಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!