Friday, July 3, 2026
spot_imgspot_img
spot_imgspot_img

ಬೆಂಗಳೂರಿನ ಬೀದಿ ವ್ಯಾಪಾರಿಗಳಿಗೆ ಶೀಘ್ರದಲ್ಲಿಯೇ ವಾಹನ ವಿತರಣೆ: ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿಯೇ ವಾಹನ ವಿತರಣೆ ಮಾಡಲಾಗುವುದು. ಈ ಸಂಬಂಧ ಯೋಜನೆಯೊಂದನ್ನು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೋರ್ಟ್ ಆದೇಶ ಅನುಸಾರ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಎಲ್ಲ ಪಕ್ಷದ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಆದರೆ, ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಆಗುವ ರೀತಿಯಲ್ಲಿ ವಾಹನ ವಿತರಿಸಲು ನಾವು ಮುಂದಾಗಿದ್ದೇವೆ ಎಂದರು.

ಬೀದಿಬದಿ ವ್ಯಾಪಾರಿಗಳಿಗೆ ವಾಹನ ವಿತರಿಸಲು ನಾವು ಮುಂದಾಗಿದ್ದೇವೆ. ಇದಕ್ಕಾಗಿ 37 ಸಾವಿರ ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ಸುಮಾರು 60 ಸಾವಿರ ಜನ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಮಾಡಿದ್ದೇವೆ. ವಾಹನ ವಿತರಣೆ ಯೋಜನೆ ಶೀಘ್ರವೇ ಜಾರಿಗೆ ತರಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಮುಖ್ಯರಸ್ತೆ ಬದಲಿಗೆ ಬೇರೆ ಸ್ಥಳಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ನಾಗರಿಕರಿಂದ ನಮ್ಮ ಮೇಲೆ ಹೆಚ್ಚಿನ ಒತ್ತಡವಿತ್ತು. ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ಎಲ್ಲ ಶಾಸಕರು ಸರ್ವಾನುಮತದಿಂದ ಕೈಗೊಂಡಿರುವ ತೀರ್ಮಾನ ಇದಾಗಿದೆ ಎಂದು ಅವರು ತಿಳಿಸಿದರು.

ಸಾರಿಗೆ ಪ್ರಯಾಣದ ದರ ವಿಚಾರದಲ್ಲಿ ಅಧಿಕಾರಿಗಳು ದೊಡ್ಡ ಆತಂಕ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದ್ದು, ಅವರ ಪ್ರಸ್ತಾವನೆ ಏನಿದೆ ಸಲ್ಲಿಕೆ ಮಾಡಿ ಎಂದು ಹೇಳಿದ್ದೇವೆ. ತಾಂತ್ರಿಕವಾಗಿ ಸಾರಿಗೆ ಸಂಸ್ಥೆಯವರಿಗೆ ಎಷ್ಟು ನಷ್ಟವಾಗುತ್ತಿದೆ ಎಂದು ಪರಿಶೀಲನೆ ಮಾಡಿದ ಬಳಿಕ ತೀರ್ಮಾನ ಮಾಡುತ್ತೇವೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

- Advertisement -

Related news

error: Content is protected !!