Saturday, July 4, 2026
spot_imgspot_img
spot_imgspot_img

ಕೂಳೂರಿನಲ್ಲಿ ಭೀಕರ ಅಪಘಾತ: ಕಂಟೈನರ್ ಲಾರಿ ಡಿಕ್ಕಿಗೆ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು-ಉಡುಪಿ ರಸ್ತೆಯ ಕೂಳೂರು ವಿಆರ್‌ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು ಗುರುತಿಸಲಾಗಿದೆ.

ಇವರು KA-19-HT-5288 ಸಂಖ್ಯೆಯ ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಸಂಜೆ ಸುಮಾರು 6:15 ಗಂಟೆಗೆ ಅದೇ ಮಾರ್ಗದಲ್ಲಿ ಬಂದ KA-19-AE-0785 ಸಂಖ್ಯೆಯ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ.ಲಾರಿಯನ್ನು ಚಾಲನೆ ಮಾಡುತ್ತಿದ್ದ ಮಹಮ್ಮದ್ ಅಜರುದ್ದೀನ್ ಅವರು ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದ್ದು, ಡಿಕ್ಕಿಯ ಬಳಿಕ ಲಾರಿ ಸ್ಕೂಟರ್ ಸವಾರನ ಮೇಲೆಯೇ ಹರಿದಿದೆ ಎನ್ನಲಾಗಿದೆ. ಪರಿಣಾಮ ಸದಾನಂದ ಶೆಟ್ಟಿಗಾರ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!